Friday, September 17, 2010

ಪಂಡಿತ ಪುಟ್ಟರಾಜ ಗವಾಯಿ ಗಾನಗಂಗೆಯಲ್ಲಿ ಲೀನ

 
ಗದಗ, ಸೆ. 17 : ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಅಂಧರ ಬಾಳಿನ ಅಶಾಕಿರಣವಾಗಿದ್ದ ಗದಗಿನ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಕವಿ ಗವಾಯಿಗಳು(97) ಶುಕ್ರವಾರ ಮಧ್ಯಾಹ್ನ 12.15ಕ್ಕೆ ಲಿಂಗೈಕ್ಯರಾಗಿದ್ದಾರೆ. ನಾಳೆ ವೀರೇಶ್ವರ ಪುಣ್ಯಾಶ್ರಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.
ಕಳೆದ ಹಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಸೋಮವಾರ ತೀವ್ರ ಅನಾರೋಗ್ಯಕ್ಕೆ ಒಳಗಾದ ಅವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಅವರ ಅಶಯದಂತೆ ಗದಗಿನ ವೀರೇಶ್ವರ ಆಶ್ರಮಕ್ಕೆ ಕರೆದುಕೊಂಡು ಬರಲಾಗಿತ್ತು.

ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಆಶ್ರಮಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಚೆನ್ನಶೆಟ್ಟಿ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನಡೆಸಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿರುವುದನ್ನು ಚೆನ್ನಶೆಟ್ಟಿ ಖಚಿತಪಡಿಸಿದ್ದಾರೆ. ಜಗತ್ತಿನಾದ್ಯಂತ ಇರುವ ಅವರ ಕೋಟ್ಯಂತರ ಭಕ್ತರಿಗೆ ಶ್ರೀಗಳ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದೆ. ಮಠದಲ್ಲಿ ಶೋಕಸಾಗರ ಮನೆ ಮಾಡಿದೆ
last persona of gods on earth.. 
 

No comments:

Post a Comment